ಶಿವಮೊಗ್ಗ ಲೈವ್
ಶಿವಮೊಗ್ಗ: ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿಯ ವತಿಯಿಂದ ಮಹಿಳಾ ದಸರಾ 2026 ಆಯೋಜಿಸಲಾಗಿದೆ. ಕಾರ್ಯಕ್ರಮಗಳು, ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 10 ಗಂಟೆಗೆ ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ವಿವಿಧ ಮಹಿಳಾ ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಆದ್ದರಿಂದ ನಗರದ ಎಲ್ಲಾ ಮಹಿಳಾ ಸಂಘ ಸಂಸ್ಥೆಗಳು, ಪ್ರತಿನಿಧಿಗಳು ಹಾಗೂ ಮಹಿಳೆಯರು ಸಭೆಯಲ್ಲಿ ಭಾಗವಹಿಸಬೇಕು ಎಂದು ಸಮುದಾಯ ವ್ಯವಹಾರಿಕ ಅಧಿಕಾರಿ ಹಾಗೂ ಮಹಿಳಾ ದಸರಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
