ಶಿವಮೊಗ್ಗ ಲೋಕಾಯುಕ್ತಕ್ಕೆ ನೂತನ ಎಸ್‌ಪಿ, ದೂರು ನೀಡುವಂತೆ ಮೊಬೈಲ್‌ ನಂಬರ್‌ ಪ್ರಕಟ

ಶಿವಮೊಗ್ಗ: ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಆ್ಯಂಟನಿ ಜಾನ್ ಜೆ.ಕೆ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಇಲ್ಲಿ ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎಸ್. ಕೌಲಾಪೂರೆ ಅವರು ವರ್ಗಾವಣೆಗೊಂಡ ಹಿನ್ನೆಲೆ ತೆರವಾದ ಸ್ಥಾನಕ್ಕೆ ಆ್ಯಂಟನಿ ಜಾನ್ ನೇಮಕಗೊಂಡಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಪ್ರಕರಣಗಳು, ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಸಾರ್ವಜನಿಕರ ಕೆಲಸ ಕಾರ್ಯಗಳ ವಿಳಂಬ ಹಾಗೂ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಅಕ್ರಮಗಳು ಕಂಡುಬಂದಲ್ಲಿ ಸಾರ್ವಜನಿಕರು ನೇರವಾಗಿ ದೂರು ನೀಡಬಹುದು. ಹೆಚ್ಚಿನ ಮಾಹಿತಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಮೊಬೈಲ್ ಸಂಖ್ಯೆ 93640 62525 ಗೆ ಸಂಪರ್ಕಿಸಬಹುದು ಎಂದು ನೂತನ ಎಸ್‌ಪಿ ಆ್ಯಂಟನಿ ಜಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Antony-John-new-Lokayukta-SP-of-Shivamogga.webp