ಶಿವಮೊಗ್ಗದಲ್ಲಿ 9 ವಾಹನಗಳ ಬಹಿರಂಗ ಹರಾಜು, ಎಲ್ಲಿ?

ಶಿವಮೊಗ್ಗ: ದೀರ್ಘಕಾಲದಿಂದ ಸರ್ಕಾರಕ್ಕೆ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಹನಗಳನ್ನು ವಿಲೇವಾರಿ ಮಾಡಲು ಪ್ರಾದೇಶಿಕ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ. ಒಟ್ಟು 9 ವಾಹನಗಳನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ನಿರ್ಧರಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 25ರಂದು ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಮಲವಗೊಪ್ಪದಲ್ಲಿರುವ ಚಾಲನಾ ತರಬೇತಿ ಟ್ರ್ಯಾಕ್‌ನಲ್ಲಿ ಈ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ. ಆಸಕ್ತರು ಸ್ಥಳಕ್ಕೆ ಆಗಮಿಸಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಇಲಾಖೆಯಿಂದ ಮನವಿ ಮಾಡಲಾಗಿದೆ.

SHIMOGA-NEWS-GRAPHICS-BY-SHIVAMOGGA-LIVE