ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ, ಪ್ರತಿ ತಿಂಗಳು ₹72,000 ಗೌರವ ಧನ

ಶಿವಮೊಗ್ಗ: ಜಿಲ್ಲಾ ಸರ್ಕಾರಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಎ.ಆರ್.ಟಿ. ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಒಂದು ವೈದ್ಯಾಧಿಕಾರಿ ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಅವಧಿಗೆ ಈ ನೇಮಕಾತಿ ನಡೆಯಲಿದೆ.

ಎಂಬಿಬಿಎಸ್ ವಿದ್ಯಾರ್ಹತೆಯೊಂದಿಗೆ ಅನುಭವ ಹೊಂದಿರುವ ಮತ್ತು 70 ವರ್ಷದೊಳಗಿನ ಆಸಕ್ತರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗೆ ಪ್ರತಿ ತಿಂಗಳು ₹72,000 ಗೌರವ ಧನ ನೀಡಲಾಗುತ್ತದೆ.

160125-mc-gann-hospital-general-image.webp

ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಜೊತೆಗೆ ವಿದ್ಯಾರ್ಹತೆ ಹಾಗೂ ಅನುಭವ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು. ಸೆಪ್ಟೆಂಬರ್ 23ರ ಸಂಜೆ 4 ಗಂಟೆಯೊಳಗೆ ಜಿಲ್ಲಾ ಸರ್ಜನ್‌, ಮೆಗ್ಗಾನ್ ಬೋಧನಾ ಆಸ್ಪತ್ರೆ, ಶಿವಮೊಗ್ಗ ಇವರ ಕೊಠಡಿಗೆ ನೇರವಾಗಿ ತಲುಪಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.