ಶಿವಮೊಗ್ಗ ದಸರಾ, ಸಿಎಂಗೆ ಮನವಿ ಸಲ್ಲಿಸಿದ ಶಾಸಕ ಚನ್ನಬಸಪ್ಪ

ಬೆಂಗಳೂರು: ಶಿವಮೊಗ್ಗ ದಸರಾ ಮಹೋತ್ಸವಕ್ಕೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಶಾಸಕ ಎಸ್‌.ಎನ್.ಚನ್ನಬಸಪ್ಪ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.

ವಿಧಾನಸಭೆ ಅಧಿವೇಶನದ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾದ ಶಾಸಕ ಎಸ್‌.ಎನ್.ಚನ್ನಬಸಪ್ಪ ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆ ಹಾಗೂ ಸುವ್ಯವಸ್ಥಿತವಾಗಿ ಆಚರಿಸಲು ಸರ್ಕಾರದ ವತಿಯಿಂದ ವಿಶೇಷ ಅನುದಾನ ಮಂಜೂರು ಮಾಡಬೇಕುʼ ಎಂದು ಮನವಿ ಮಾಡಿದರು.

Memorandum to cm

ನಗರದ ಅಭಿವೃದ್ಧಿ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆಯುವ ವಿಶ್ವಾಸವಿದೆ ಎಂದು ಚನ್ನಬಸಪ್ಪ ತಿಳಿಸಿದ್ದಾರೆ.

MLA Channabasappa submits memorandum to CM DK Shivakumar about Shivamogga Dasara