4500 ಪೊಲೀಸರು, 3000 ಸಿಸಿ ಕ್ಯಾಮರಾ, ಶಿವಮೊಗ್ಗದಲ್ಲಿ ಬಂದೋಬಸ್ತ್‌ ಹೆಚ್ಚಳ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ: ಸೆ.25ರಂದು ನಗರದ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ದೊಡ್ಡ ಸಂಖ್ಯೆಯ ಜನರು ಮೆರವಣಿಗೆಯಲ್ಲಿ ಭಾಗವಹಿಸುವ ಹಿನ್ನೆಲೆ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌, ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಂದರ್ಭದ ಭದ್ರತಾ ವ್ಯವಸ್ಥೆಯ ಕುರಿತು ತಿಳಿಸಿದರು.

Shivamogga SP B Nikhil

ಎಸ್‌ಪಿ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌

POINT-1

ನಗರದಲ್ಲಿ ಸುಸೂತ್ರವಾಗಿ ಮೆರವಣಿಗೆ ನಡೆಸಲು ಒಟ್ಟು 4,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 5 ಎಸ್‌ಪಿ, 22 ಡಿಎಸ್‌ಪಿ, 164 ಇನ್ಸ್‌ಪೆಕ್ಟರ್‌, 300 ಸಬ್ ಇನ್ಸ್‌ಪೆಕ್ಟರ್‌, 4,000 ಹೆಡ್ ಕಾನ್‌ಸ್ಟೇಬಲ್, ಕಾನ್‌ಸ್ಟೇಬಲ್ ಹಾಗೂ ಗೃಹರಕ್ಷಕ ಸಿಬ್ಬಂದಿ ಭದ್ರತಾ ಕಾರ್ಯದಲ್ಲಿದ್ದಾರೆ.

POINT-2

12 ಕೆಎಸ್ಆರ್‌ಪಿ, 2 ಆರ್‌ಎಎಫ್, 1 ಎಸ್‌ಎಎಫ್ ಹಾಗೂ 10 ಡಿಎಆರ್ ತುಕಡಿಗಳನ್ನು ಬಂದೊಬಸ್ತ್‌ಗಾಗಿ ನಿಯೋಜಿಸಲಾಗಿದೆ. ಈಗಾಗಲೇ ರೂಟ್ ಮಾರ್ಚ್‌ಗೆ ಸೂಕ್ತ ತಯಾರಿ ನಡೆಸಲಾಗಿದೆ.

POINT-3

ಅಪರಾಧ ತಡೆ ಹಾಗೂ ಸಾರ್ವಜನಿಕರ ಸುರಕ್ಷತೆಗೆ ನಗರದಾದ್ಯಂತ 3 ಸಾವಿರ ಸಿಸಿ ಕ್ಯಾಮೆರಾಗಳು ಮತ್ತು 12 ಡ್ರೋನ್ ಕ್ಯಾಮೆರಾಗಳ ಮೂಲಕ ನಿಗಾ ವಹಿಸಲಾಗಿದೆ.

Hindu-Mahasabha-Ganesha-procession-tomorrow
POINT-4

ಮುಂಜಾಗ್ರತಾ ಕ್ರಮವಾಗಿ ಸುಮಾರು 900 ಜನರ ವಿರುದ್ಧ ಕಾನೂನು ಕ್ರಮ ಜರುಗಿಸಿದೆ. 34 ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದೆ. ರೌಡಿ ಪೆರೇಡ್ ನಡೆಸಿ 20 ಜನರನ್ನು ಜೈಲಿಗೆ ಕಳುಹಿಸಲಾಗಿದೆ. ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಸಾಮಾಜಿಕ ಜಾಲತಾಣಗಳ ಮೇಲೆಯೂ ಪ್ರತ್ಯೇಕ ನಿಗಾ ವಹಿಸಲಾಗಿದೆ.

POINT-5

ನಗರದ ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಸಂಚಾರ ನಿಯಂತ್ರಣಕ್ಕೆ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸಾರ್ವಜನಿಕ ವಾಹನಗಳ ನಿಲುಗಡೆಗೆ ಪ್ರತ್ಯೇಕ ಸ್ಥಳಗಳನ್ನು ಗುರುತಿಸಲಾಗಿದೆ.

POINT-6

ಮೆರವಣಿಗೆಯ ಹಿನ್ನೆಲೆ ನಗರದಾದ್ಯಂತ ನಿರಂತರ ಗಸ್ತು ಮುಂದುವರಿದಿದೆ. ಸಾರ್ವಜನಿಕರು ವಾಹನ ಪಾರ್ಕಿಂಗ್ ಸ್ಥಳಗಳ ಮಾಹಿತಿಯನ್ನು ಮುಂಚಿತವಾಗಿ ತಿಳಿದುಕೊಂಡು, ಪೊಲೀಸ್ ಹಾಗೂ ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್ ತಿಳಿಸಿದ್ದಾರೆ.