ಶಿವಮೊಗ್ಗ ಲೈವ್
ಶಿವಮೊಗ್ಗ: ದುಬಾರೆ ಆನೆ ಶಿಬಿರದಲ್ಲಿ ನಡೆದ ಆಕಸ್ಮಿಕ ದುರ್ಘಟನೆ ಹಿನ್ನೆಲೆ ಸಕ್ರೆಬೈಲು ಆನೆಬಿಡಾರಕ್ಕೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಆದರೆ, ಅರಣ್ಯ ಇಲಾಖೆಯ ಮಾರ್ಗಸೂಚಿ ಅನ್ವಯ ಎಲ್ಲ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿರುವುದರಿಂದ ಸೆ.26ರಿಂದ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕರಿಗೆ ಮತ್ತು ಆನೆಗಳಿಗೆ ಪ್ರತ್ಯೇಕ ಮಾರ್ಗಗಳನ್ನು ಗುರುತಿಸಲಾಗಿದೆ. ಸಾರ್ವಜನಿಕರು ಮತ್ತು ಆನೆಗಳ ನಡುವೆ ನೇರ ಸಂಪರ್ಕ ಬಾರದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಹಿತಿಗೆ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಲಾಗಿದೆ.
