ಶಿವಮೊಗ್ಗ ಲೈವ್
ಶಿವಮೊಗ್ಗ: ಸುದ್ದಿಗೋಷ್ಠಿ ನಡೆಸಿ ಪಕ್ಷದ ಮುಖಂಡರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಕ್ಕಾಗಿ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷ ಹೆಚ್.ಎನ್. ಸುಂದರೇಶ್ ಅವರಿಗೆ ಕಾರಣ ಕೇಳಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಸೆ.23ರಂದು ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ಸಂದರ್ಭ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಪಕ್ಷದ ವಿವಿಧ ವಿಚಾರಗಳ ಕುರಿತು ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಮುಖಂಡರು ದೂರು ನೀಡಿದ್ದಾರೆ. ಈ ಹೇಳಿಕೆಗಳಿಂದ ಪಕ್ಷದ ಹಾಗೂ ಸ್ಥಳೀಯ ಮುಖಂಡರಿಗೆ ಮುಜುಗರ ಉಂಟಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಪಕ್ಷದ ಶಿಸ್ತಿಗೆ ಧಕ್ಕೆ ಉಂಟುಮಾಡುವ ರೀತಿ ಹೇಳಿಕೆ ನೀಡಿರುವ ಬಗ್ಗೆ ನೋಟಿಸ್ ನೀಡಲಾಗಿದ್ದು, ಏಳು ದಿನಗಳೊಳಗಾಗಿ ಪ್ರಕರಣದ ಕುರಿತು ಸಮಜಾಯಿಷಿ ನೀಡುವಂತೆ ಸೂಚಿಸಲಾಗಿದೆ.