ಶಿವಮೊಗ್ಗದಲ್ಲಿ ಐಎಎಸ್‌ ಅಧಿಕಾರಿ ರಿಶಿ ಆನಂದ್‌ ಅಧಿಕಾರ ಸ್ವೀಕಾರ

ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಐಎಎಸ್ ಅಧಿಕಾರಿ ರಿಷಿ ಆನಂದ್ ಅಧಿಕಾರ ಸ್ವೀಕರಿಸಿದರು. ಈ ವೇಳೆ ಜಿಪಂ ಯೋಜನಾಧಿಕಾರಿ ಹನುಮಾ ನಾಯ್ಕ, ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಬಿಇಒ ರಮೇಶ್ ಮುಂತಾದವರು ನೂತನ ಸಿಇಒಗೆ ಸ್ವಾಗತ ಕೋರಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಿಷಿ ಆನಂದ್‌, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಿಪಂ ಮೂಲಕ ಅನುಷ್ಠಾನಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯೋಜನೆಗಳಿಗೆ ವೇಗ ನೀಡಲಾಗುವುದು. ಸಾರ್ವಜನಿಕರಿಗೆ ವಿಳಂಬವಾಗದಂತೆ ಸೇವೆ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

IAS-Officer-Rishi-Ananda-Takes-Charge-as-ZP-CEO-in-Shimoga

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗುವುದು. ವಿಬಿ ಜಿ ರಾಮ್ ಜಿ ಮೂಲಕ ಗರಿಷ್ಠ ಪ್ರಮಾಣದಲ್ಲಿ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಡಿಜಿಟಲ್ ವ್ಯವಸ್ಥೆ ಮೂಲಕ ಸಾರ್ವಜನಿಕ ಸೇವೆಗಳಿಗೆ ವೇಗ ನೀಡಲಾಗುವುದು.

– ರಿಶಿ ಆನಂದ್‌, ಜಿಲ್ಲಾ ಪಂಚಾಯಿತಿ ಸಿಇಒ