ಶಿವಮೊಗ್ಗ ಲೈವ್
ಶಿವಮೊಗ್ಗ: 220 ಕೆವಿ ಎಂಆರ್‌ಎಸ್ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸದ ಹಿನ್ನೆಲೆ ಸೆ.29ರಂದು ಬೆಳಿಗ್ಗೆ 9:30 ರಿಂದ ಸಂಜೆ 5:30ರವರೆಗೆ ಹೊಳೆಹೊನ್ನೂರು ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 18 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಹೊಳೆಹೊನ್ನೂರು, ನಾಗತಿಬೆಳಗಲು, ದಾಸರಕಲ್ಲಹಳ್ಳಿ, ಕೆ.ಕೆ.ಮಗ್ಗೆ, ಯಡೇಹಳ್ಳಿ, ಅರಹತೊಳಲು, ಎಸ್.ಕೆ.ಮಗ್ಗೆ, ಸಿದ್ಲಿಪುರ, ಹನುಮಂತಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
