ಸೊರಬ: ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನ ನೀಡಲಾಗುತ್ತಿದ್ದು, ಸೊರಬ ತೋಟಗಾರಿಕೆ ಇಲಾಖೆಯು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. (ಈ ಸುದ್ದಿಯನ್ನು ಇನ್ನು 44 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಮೊದಲ 2 ಹೆಕ್ಟೇರ್‌ವರೆಗಿನ ಪ್ರದೇಶಕ್ಕೆ ಶೇ.90 ರಷ್ಟು ಸಹಾಯಧನ ದೊರೆಯಲಿದೆ. 2 ಹೆಕ್ಟೇರ್‌ಗಿಂತ ಹೆಚ್ಚಿನ ಪ್ರದೇಶ ಹೊಂದಿರುವ ರೈತರಿಗೆ ಶೇ.45 ರಷ್ಟು ಧನಸಹಾಯ ದೊರೆಯಲಿದ್ದು, ಗರಿಷ್ಠ 5 ಹೆಕ್ಟೇರ್‌ವರೆಗೆ ಈ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಸಕ್ತ ರೈತರು ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ. ಇಲಾಖೆಯಿಂದ ಅನುಮೋದನೆ ಪಡೆದ ಕಂಪನಿಗಳ ಮೂಲಕವೇ ಸೂಕ್ಷ್ಮ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳುವುದು ಕಡ್ಡಾಯ ಎಂದು ತಿಳಿಸಲಾಗಿದೆ. ರೈತರ ವಂತಿಕೆ ಹಣವನ್ನು ಅನುಮೋದಿತ ಕಂಪನಿಯ ಬ್ಯಾಂಕ್ ಖಾತೆಗೆ ಡಿಜಿಟಲ್ ಪಾವತಿ ಮೂಲಕವೇ ಜಮೆ ಮಾಡಬೇಕು. ಯಾವುದೇ ಕಾರಣಕ್ಕೂ ನಗದು ವ್ಯವಹಾರಕ್ಕೆ ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ರೈತರು ಆಯಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಸೊರಬದ ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು.