ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. (ಶಿವಮೊಗ್ಗ ಲೈವ್.ಕಾಂ | ಮುಂದಿನ 5 ಪ್ಯಾರಾಗಳು ಕೆಳಗಿವೆ)
ಸೆಪ್ಟೆಂಬರ್ 29ರಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ಹೊರಟು ಸಂಜೆ 5.30ಕ್ಕೆ ಶಿವಮೊಗ್ಗ ತಲುಪಲಿದ್ದಾರೆ. ರಾತ್ರಿ ಶಿವಮೊಗ್ಗದ ಸರ್ಕ್ಯೂಟ್ ಹೌಸ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಸೆಪ್ಟೆಂಬರ್ 30ರಂದು ಬೆಳಿಗ್ಗೆ 9 ಗಂಟೆಗೆ ಶಿವಮೊಗ್ಗದಿಂದ ಹೊರಟು ಶಿಕಾರಿಪುರ ತಾಲ್ಲೂಕಿನ ಕಿಟ್ಟದಹಳ್ಳಿಗೆ ಆಗಮಿಸಲಿದ್ದಾರೆ. ಅಲ್ಲಿ ಬೆಳಿಗ್ಗೆ 9.45ಕ್ಕೆ ಭಾರತ್ ಜೋಡೋ ಯಾತ್ರೆ – 2.0 ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಪಾದಯಾತ್ರೆಯು ಕಿಟ್ಟದಹಳ್ಳಿಯಿಂದ ಮಟ್ಟಿಕೋಟೆ ಕ್ರಾಸ್, ಹೊಸನಗರ ಕ್ರಾಸ್ ಹಾಗೂ ನೆಲವಾಗಿಲು ಕ್ರಾಸ್ ಮಾರ್ಗವಾಗಿ ಶಿಕಾರಿಪುರ ನಗರ ಪ್ರವೇಶಿಸಲಿದೆ.
ಮಧ್ಯಾಹ್ನ 1 ಗಂಟೆಗೆ ಶಿಕಾರಿಪುರದ ಹೊಸ ಸಂತೆ ಮೈದಾನದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆ – 2.0 ಬಹಿರಂಗ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ನಂತರ ಸಂಜೆ 4 ಗಂಟೆಗೆ ಶಿಕಾರಿಪುರದಿಂದ ಹೊರಟು ರಾತ್ರಿ 9 ಗಂಟೆಗೆ ಬೆಂಗಳೂರಿಗೆ ತಲುಪಲಿದ್ದಾರೆ.