ಶಿವಮೊಗ್ಗ ನಗರ, ಗ್ರಾಮಾಂತರ ಪ್ರದೇಶದಲ್ಲಿ ಸೆಪ್ಟೆಂಬರ್‌ 30ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ: ನಗರದ ಎಂ.ಆರ್.ಎಸ್ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ನಿಯಮಿತ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಸೆಪ್ಟೆಂಬರ್ 30ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4:30 ರವರೆಗೆ ನಗರದ ಹಲವು ಬಡಾವಣೆ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಂ.ಆರ್.ಎಸ್ 220/11 ಕೆವಿ ಕೇಂದ್ರದ 66 ಕೆವಿ ಎಂಜಿ-1 ಬಿಸಿ ಯುನಿಟ್‌ನಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕೆಲಸ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ವಿದ್ಯುತ್ ಬಂದ್ ಮಾಡಲಾಗುತ್ತಿದೆ.

Power Cut

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ಕರೆಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ ಹಾಗೂ ಹುಣಸೋಡು.

ಕಲ್ಲಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಮತ್ತು ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.