ಸುಂದರೇಶ್‌ ಫೋಟೊಗೆ ಬೆಂಕಿ ಹಚ್ಚಿ ಆಕ್ರೋಶ, 3 ದಿನದ ಗಡುವು ನೀಡಿದ ಪ್ರತಿಭಟನಾಕಾರರು

ಶಿವಮೊಗ್ಗ: ವಿಧಾನ ಪರಿಷತ್‌ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್ ಅವರ ಕುರಿತು ಮಾತನಾಡುವ ವೇಳೆ ಸೂಡಾ ಅಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಕುರುಬ ಸಮುದಾಯದ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಹಾಗೂ ಕುರುಬ ಸಮಾಜದ ಪ್ರಮುಖರು, ಸುಂದರೇಶ್ ವಿರುದ್ಧ ಘೋಷಣೆ ಕೂಗಿದರು. ಸುಂದರೇಶ್ ಅವರು ಕುರುಬ ಸಮಾಜದ ಕ್ಷಮೆಯಾಚಿಸಬೇಕು. ಮೂರು ದಿನಗಳ ಒಳಗೆ ಕ್ಷಮೆ ಕೇಳದೆ ಇದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ವಾಟಾಳ್ ಮಂಜು ಸೇರಿದಂತೆ ಹಲವರು ಭಾಗವಹಿಸಿದ್ದರು.

Protest-Against-HS-Sundaresh-in-Shivamogga.webp