ಹೊಳೆಹೊನ್ನೂರಿನ ತರಬೇತಿ ಕೇಂದ್ರಕ್ಕೆ ರಾಜ್ಯಮಟ್ಟದ ಬೆಸ್ಟ್‌ ಪರ್ಫಾರ್ಮರ್‌ ಪ್ರಶಸ್ತಿ

ಶಿವಮೊಗ್ಗ: ಹೊಳೆಹೊನ್ನೂರಿನ ಭಾಗ್ಯಶ್ರೀ ಕಂಪ್ಯೂಟರ್ಸ್–ಕಿಯೋನಿಕ್ಸ್ ಕಂಪ್ಯೂಟರ್ ಶಿಕ್ಷಣ ಮತ್ತು ತರಬೇತಿ ಕೇಂದ್ರಕ್ಕೆ ರಾಜ್ಯಮಟ್ಟದ ಕಂಪ್ಯೂಟರ್ ತರಬೇತಿ ಕೇಂದ್ರಗಳ ವಿಭಾಗದಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಬೆಸ್ಟ್ ಪರ್ಫಾರ್ಮರ್ ಅವಾರ್ಡ್ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್‌ನ ದಿ ಗ್ರ್ಯಾಂಡ್ ಬಾಲ್‌ರೂಮ್‌ನಲ್ಲಿ ನಡೆದ ಕಿಯೋನಿಕ್ಸ್ ಸಂಸ್ಥೆಯ 50ನೇ ಗೋಲ್ಡನ್ ಜುಬಿಲಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಐಟಿ ಮತ್ತು ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.

Award-for-Holehonnuru-Bhagyasri-Computers-–-KEONICS-Computer-Education-and-Training-Centre

ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಮೆನನ್ ರಾಜೇಂದ್ರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಗುಣಮಟ್ಟದ ಕಂಪ್ಯೂಟರ್ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿಗೆ ಸಂಸ್ಥೆ ನೀಡುತ್ತಿರುವ ನಿರಂತರ ಸೇವೆಗೆ ದೊರೆತಿರುವ ಈ ಗೌರವವು ಹೆಮ್ಮೆಯ ಮೈಲಿಗಲ್ಲಾಗಿದೆ ಎಂದು ಭಾಗ್ಯಶ್ರೀ ಕಂಪ್ಯೂಟರ್ಸ್‌–ಕಿಯೋನಿಕ್ಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.