ಶಿವಮೊಗ್ಗ ಲೈವ್
ಶಿವಮೊಗ್ಗ: ಮಲ್ಲಿಗೇನಹಳ್ಳಿ ಬಳಿ ಬೆಂಗಳೂರು–ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಲ್ಲಿ ಪೆಸಿಟ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ವಿದ್ಯಾರ್ಥಿಗಳು ಕಾಲೇಜು ಮುಗಿಸಿಕೊಂಡು ಬೈಕಿನಲ್ಲಿ ಶಿವಮೊಗ್ಗ ನಗರದತ್ತ ತೆರಳುತ್ತಿದ್ದರು. ಖಾಸಗಿ ಬಸ್ಸು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಅಪಘಾತದಲ್ಲಿ ರವೀಂದ್ರ (19), ಮಿಥುನ್ (20) ಹಾಗೂ ತರುಣ್ (19) ಎಂಬುವವರು ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡಿರುವ ರವೀಂದ್ರ ಹಾಗೂ ಮಿಥುನ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತರುಣ್ಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಹೆದ್ದಾರಿಯಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆಯ ಒಂದೇ ಬದಿಯಲ್ಲಿ ಎರಡು ಕಡೆಯ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದೇ ಅಪಾಘತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.