ಶಿವಮೊಗ್ಗ ಲೈವ್
ಶಿವಮೊಗ್ಗ: ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಮಧುಸೂದನ್.ಸಿ.ಜಿ ಅವರನ್ನು ನೇಮಕ ಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಮಧುಸೂದನ್ ಅವರು ಶನಿವಾರ ಅಧಿಕಾರ ಸ್ವೀಕರಿಸಲಿದ್ದರೆ.
ಮಧುಸೂದನ್ ಅವರು ವಿದ್ಯಾರ್ಥಿ ದಿಸೆಯಿಂದಲೇ ಎನ್‌ಎಸ್‌ಯುಐ ಮೂಲಕ ವಿದ್ಯಾರ್ಥಿಗಳ ಸಂಘಟನೆ ಮಾಡಿದ್ದರು. ನಂತರ ಯುವ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡು ಪಕ್ಷದ ಸಂಘಟನೆ ಮಾಡಿದ್ದರು. ತಳ ಹಂತದಿಂದಲೇ ಸಂಘಟನೆ ಮಾಡಿದ್ದ ಮಧುಸೂದನ್ ಈಗ ಸೂಡಾ ಅಧ್ಯಕ್ಷ ಸ್ಥಾನ ಲಭಿಸಿದೆ. ಶನಿವಾರ ಬೆಳಿಗ್ಗೆ ಮಧುಸೂದನ್ ಅವರು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
