ಶಿವಮೊಗ್ಗ ಲೈವ್
ಆನಂದಪುರ: ಸಾಲಬಾಧೆ ಹಾಗೂ ಕೆಲಸದ ಅನಿಶ್ಚಿತತೆಯಿಂದ ಮನನೊಂದ ಚಾಲಕರೊಬ್ಬರು ಚಂಪಕ ಸರಸು ಕೊಳಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಮೀಪದ ತ್ಯಾಗರ್ತಿಯಲ್ಲಿ ನಡೆದಿದೆ. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ದಾಸಕೊಪ್ಪ ಗ್ರಾಮದ ನಿವಾಸಿ ಚಾಂದ್ ಪಾಷಾ (46) ಆತ್ಮಹತ್ಯೆ ಮಾಡಿಕೊಂಡವರು. ವಾಹನ ಚಾಲಕ ವೃತ್ತಿ ಮಾಡಿಕೊಂಡಿದ್ದ ಇವರು ಜೀವನ ನಿರ್ವಹಣೆಗಾಗಿ ಸಾಲ ಮಾಡಿಕೊಂಡಿದ್ದರು. ಆದರೆ, ಇತ್ತೀಚೆಗೆ ಸರಿಯಾಗಿ ಕೆಲಸ ಸಿಗದೇ ಸಾಲ ಮರುಪಾವತಿಸಲು ಸಾಧ್ಯವಾಗದೆ ತೀವ್ರ ಮಾನಸಿಕವಾಗಿ ನೊಂದಿದ್ದರು ಎಂದು ಆರೋಪಿಸಲಾಗಿದೆ.

ಸೆಪ್ಟೆಂಬರ್ 30ರ ಸಂಜೆ 6.30ರ ವೇಳೆಗೆ ಮನೆಯಿಂದ ಹೊರಟಿದ್ದ ಚಾಂದ್ ಪಾಷಾ ರಾತ್ರಿ 10 ಗಂಟೆಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಆತಂಕಗೊಂಡ ಕುಟುಂಬಸ್ಥರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ದರು. ಅಕ್ಟೋಬರ್ 1ರಂದು ಬೆಳಿಗ್ಗೆ ಮಹಂತನ ಮಠದ ಕೊಳದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.