ಶಿವಮೊಗ್ಗ ಲೈವ್
ಶಿವಮೊಗ್ಗ: ಮಹಾರಾಷ್ಟ್ರದ ಪುಣೆಯ ಕಡಕಿಯಲ್ಲಿರುವ ಸಿಂಬಿಯೋಸಿಸ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್‌ನಲ್ಲಿ 2027-2029ನೇ ಸಾಲಿನ ಎಂಬಿಎ ವಿದ್ಯಾಭ್ಯಾಸಕ್ಕಾಗಿ ಸೈನಿಕರು, ಮಾಜಿ ಸೈನಿಕರು ಮತ್ತು ಅವಲಂಬಿತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಸಂಸ್ಥೆಯ www.sims.edu ಜಾಲತಾಣದಲ್ಲಿ ಆನ್‌ಲೈನ್ ಮುಖಾಂತರ ನ.25 ರೊಳಗಾಗಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಸಿ.ಎ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
