ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 8ರಂದು ಬೆಳಿಗ್ಗೆ 10 ಗಂಟೆಗೆ ಖಾಸಗಿ ಕಂಪನಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 40 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ನಗರದ ಸಾಗರ ರಸ್ತೆಯ ಪಂಪಾ ನಗರ 2ನೇ ಕ್ರಾಸ್, ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಆವರಣದಲ್ಲಿ ಈ ಸಂದರ್ಶನ ನಡೆಯಲಿದೆ. ಇಟಾಚಿ ಕ್ಯಾಶ್ ಮ್ಯಾನೇಜ್ಮೆಂಟ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.

ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 18 ರಿಂದ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಭಾಗವಹಿಸಲು ಅರ್ಹರಾಗಿದ್ದಾರೆ. ಆಸಕ್ತರು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಹಾಜರಾಗಕು. ಉದ್ಯೋಗ ನೇರ ಸಂದರ್ಶನಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ನೇರವಾಗಿ ಅಥವಾ ದೂರವಾಣಿ ಸಂಖ್ಯೆ 9380663606, 9108235132 ಸಂಪರ್ಕಿಸಬಹುದು.