ತ್ಯಾವರೆಕೊಪ್ಪ ಹುಲಿ, ಸಿಂಹಧಾಮದಿಂದ ಪ್ರವಾಸಿಗರಿಗೆ ಪ್ರಮುಖ ಸೂಚನೆ, ಏನದು?

ಶಿವಮೊಗ್ಗ: ದಸರಾ ಹಬ್ಬದ ಹಿನ್ನೆಲೆ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ ಹಾಗೂ ಮೃಗಾಲಯವನ್ನು ಅಕ್ಟೋಬರ್‌ 13 ಮತ್ತು 20ರಂದು ಸಹ ಸಾರ್ವಜನಿಕರ ವೀಕ್ಷಣೆಗೆ ತೆರೆಯಲು ನಿರ್ಧರಿಸಲಾಗಿದೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಸಾಮಾನ್ಯವಾಗಿ ಮಂಗಳವಾರ ಮೃಗಾಲಯಕ್ಕೆ ವಾರದ ರಜಾದಿನವಾಗಿರುತ್ತದೆ. ಆದರೆ ಹಬ್ಬದ ರಜೆಗಳ ಸಂದರ್ಭ ಆಗಮಿಸುವ ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಈ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Lion-Tiger-Safari-Tyavrekoppa-in-Shimoga.