ಶಿವಮೊಗ್ಗ ಲೈವ್
ತುಮರಿ: ಸಮೀಪದ ಬ್ಯಾಕೋಡು 33/11 ಕೆ. ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಿಮಿತ್ತ ಅ. 9ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜೋಗ ಉಪ ವಿಭಾಗದ ಎಸ್.ಎಸ್. ಭೋಗ್, ತುಮರಿ ಹಾಗೂ ಕುದರೂರು, ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
