ಶಿವಮೊಗ್ಗ ಲೈವ್
ಶಿವಮೊಗ್ಗ: ತಾಲ್ಲೂಕಿನ ದುಮ್ಮಳ್ಳಿ ಗ್ರಾಮದ ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡುವಾಗ ಹೆಜ್ಜೇನುಗಳು ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮಲವಗೊಪ್ಪದ ನಿವಾಸಿ ತಿಮ್ಮನಾಯ್ಕ (56) ಮೃತರು. ಬುಧವಾರ ಸಂಜೆ ತಿಮ್ಮನಾಯ್ಕ ಅವರು ತಮ್ಮ ಹೊಲದಲ್ಲಿ ಮೆಕ್ಕೆಜೋಳ ಕಟಾವು ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಹೆಜ್ಜೇನುಗಳು ದಾಳಿ ನಡೆಸಿದ್ದವು. ಅಸ್ವಸ್ಥಗೊಂಡ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
