ಪಡಿತರ ಚೀಟಿದಾರರಿಗೆ ಶಿವಮೊಗ್ಗ ಜಿಲ್ಲಾಧಿಕಾರಿಯಿಂದ ಪ್ರಮುಖ ಅಪ್‌ಡೇಟ್‌, ಏನದು?

ಶಿವಮೊಗ್ಗ: ಜಿಲ್ಲೆಯ ಪಡಿತರ ಚೀಟಿದಾರರಿಗೆ ಈ ತಿಂಗಳ ಉಚಿತ ಅಕ್ಕಿ ಹಾಗೂ ರಾಗಿ ವಿತರಣೆ ಆರಂಭವಾಗಿದ್ದು, ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಲ್ಲಿ ಧಾನ್ಯ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಅಂತ್ಯೋದಯ ಅನ್ನ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 14 ಕೆಜಿ ಅಕ್ಕಿ ಹಾಗೂ 21 ಕೆಜಿ ರಾಗಿ ನೀಡಲಾಗುತ್ತದೆ. ನಾಲ್ಕಕ್ಕಿಂತ ಹೆಚ್ಚು ಸದಸ್ಯರಿರುವ ಅಂತ್ಯೋದಯ ಕಾರ್ಡ್‌ಗಳಿಗೆ ಹೆಚ್ಚುವರಿ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಸಿಗಲಿದೆ. ಇನ್ನು ಆದ್ಯತಾ ವಲಯದ ಕೇಂದ್ರ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 2 ಕೆಜಿ ಅಕ್ಕಿ ಹಾಗೂ 3 ಕೆಜಿ ರಾಗಿ ಮತ್ತು ರಾಜ್ಯ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ದೊರೆಯಲಿದೆ. ಅನ್ನಭಾಗ್ಯ ಯೋಜನೆಯಡಿ ಆದ್ಯತಾ ವಲಯದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಪಡಿತರ ಪಡೆಯಲು ಬೆರಳಚ್ಚು ನೀಡುವುದು ಕಡ್ಡಾಯ.

Shimoga-DC-Prabhulinga-Kavalikatti

ಪ್ರತಿದಿನ ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಪಡಿತರ ವಿತರಣೆಗೆ ಸರ್ವರ್ ಲಭ್ಯವಿರಲಿದೆ. ಸಾರ್ವಜನಿಕರು ನಿಗದಿತ ಅವಧಿಯಲ್ಲಿ ತೆರಳಿ ಧಾನ್ಯ ಪಡೆಯಬಹುದು. ಪಡಿತರ ವಿತರಣೆಯಲ್ಲಿ ಯಾವುದೇ ದೂರುಗಳಿದ್ದರೆ ಉಚಿತ ಸಹಾಯವಾಣಿ 1967 ಅಥವಾ ಹತ್ತಿರದ ಆಹಾರ ಇಲಾಖೆ ಕಚೇರಿಗೆ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.