ಒಂದೇ ಕುಟುಂಬದ ಇಬ್ಬರು ಬಾಲಕರು ನೀರುಪಾಲು, ಆಗಿದ್ದೇನು?

ಸಾಗರ: ಕೆರೆಯಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ. ಸಾಗರ ತಾಲ್ಲೂಕಿನ ಆಲಳ್ಳಿ ಗ್ರಾಮದ ಹೊಸಕೆರೆಯಲ್ಲಿ ಘಟನೆ ಸಂಭವಿಸಿದೆ.

ಮುಳುಕೇರಿ ಹಾಗೂ ಆಲಳ್ಳಿ ಗ್ರಾಮದ ಲೇಖನ್ (13) ಮತ್ತು ಪುನೀತ್ (11) ಮೃತರು. ಹೊಸಕೆರೆಗೆ ಈಜಲು ಹೋಗಿದ್ದರು. ಆದರೆ ಆಳ ತಿಳಿಯದೇ ಈ ದುರಂತ ಸಂಭವಿಸಿದೆ.

two-boys-drown-in-Sagar-Hosakere

ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಮಕ್ಕಳ ಮೃತದೇಹಗಳನ್ನು ಇರಿಸಲಾಗಿದೆ. ವಿಷಯ ತಿಳಿಸು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಂತಾಪ ಸೂಚಿಸಿದ್ದಾರೆ. ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.