ಶಿವಮೊಗ್ಗ ಲೈವ್
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೌಶಲ್ಯ ಅಭಿವೃದ್ಧಿ ನಿಗಮವು ವಿಶ್ವ ಕೌಶಲ್ಯ ಸ್ಪರ್ಧೆ-2026 ಹಾಗೂ ರಾಜ್ಯದಲ್ಲಿ ನಡೆಯುವ ಇಂಡಿಯಾ ಸ್ಕಿಲ್ ಕಾಂಪಿಟಿಷನ್ ಕರ್ನಾಟಕ 2026ರ ವಿವಿಧ ಕೌಶಲ್ಯ ಸ್ಪರ್ಧೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು skillindiadigital.gov.in ಜಾಲತಾಣದಲ್ಲಿ ಅ.19 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://www.skillindiadigital.gov.in/home ಹಾಗೂ ಸಹಾಯವಾಣಿ 9606492216/ 7204237323 ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
