ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಚೆಕ್‌ಪೋಸ್ಟ್‌, ವಾಹನಗಳ ದಿಢೀರ್‌ ತಪಾಸಣೆ

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಪೊಲೀಸರು ಚೆಕ್‌ಪೋಸ್ಟ್‌ಗಳನ್ನು ತೆರೆದು ರಾತ್ರಿ ವೇಳೆ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ರಾತ್ರಿ ವೇಳೆ ಸಂಚರಿಸುವ ವಾಹನಗಳನ್ನು ತಡೆದು ಪರಿಶೀಲಿಸಲಾಗುತ್ತಿದೆ.

ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆ ವಹಿಸುವುದು ಈ ಕಾರ್ಯಾಚರಣೆಯ ಉದ್ದೇಶವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Police-Checks-Vehicles-during-night