ಶಿವಮೊಗ್ಗ: 13 ವರ್ಷದ ಮಾನಸಿಕ ಅಸ್ವಸ್ಥೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 27 ವರ್ಷದ ಯುವಕನಿಗೆ 3 ವರ್ಷ ಕಠಿಣ ಕಾರಾಗೃಹವಾಸ ಹಾಗೂ ₹50,000 ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್.ಕಾಂ ವೆಬ್ಸೈಟ್ನಲ್ಲಿ. ಈ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಪಿಎಸ್ಐ ರಾಜುರೆಡ್ಡಿ ಅವರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ದಂಡದ ಮೊತ್ತದ ಜೊತೆಗೆ, ಸಂತ್ರಸ್ತ ಬಾಲಕಿಗೆ ₹40,000 ಪರಿಹಾರ ನೀಡುವಂತೆಯೂ ನ್ಯಾಯಾಧೀಶರು ಆದೇಶಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.