ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಬಿ.ಹೆಚ್. ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ತಡವಾಗಿ ಪ್ರಕರಣ ದಾಖಲಾಗಿದೆ. ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್.ಕಾಂ ವೆಬ್ಸೈಟ್ನಲ್ಲಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗ ತಾಲ್ಲೂಕಿನ ಸಿದ್ಧರಹಳ್ಳಿ ನಿವಾಸಿ ಚಂದ್ರಶೇಖರ್ ಎಂಬುವವರಿಗೆ ಸೇರಿದ ಹೀರೊ ಹೋಂಡಾ ಪ್ಯಾಷನ್ ಪ್ರೋ ಬೈಕ್ ಕಳವಾಗಿದೆ. ಚಂದ್ರಶೇಖರ್ ಅವರ ಮಗ ದರ್ಶನ್ ಸೆಪ್ಟೆಂಬರ್ 25 ರಂದು ಸಂಜೆ ಬೈಕ್ ತಂದಿದ್ದರು. ಶಿವಮೊಗ್ಗದ ಬಿ.ಹೆಚ್. ರಸ್ತೆಯ ಮಾಡರ್ನ್ ಟಾಕೀಸ್ ಪಕ್ಕದ ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಗಣೇಶ ಮೆರವಣಿಗೆ ನೋಡಲು ತೆರಳಿದ್ದರು. ವಾಪಸ್ ಬಂದಾಗ ಬೈಕ್ ಅಲ್ಲಿರಲಿಲ್ಲ. ಎಲ್ಲೆಡೆ ಹುಡುಕಿದರು ಬೈಕ್ ಸಿಕ್ಕಿಲ್ಲ. ಆದ್ದರಿಂದ ತಡವಾಗಿ ದೂರು ನೀಡುತ್ತಿರುವುದಾಗಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
