ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಸದಸ್ಯೆ ನಿಧನ

ಶಿವಮೊಗ್ಗ: ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಹಾಗೂ ಬಿಜೆಪಿ ನಾಯಕಿ ಕಲ್ಪನಾ ರಮೇಶ್ ಅವರು ನಗರದ ಸರ್ಜಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. (ಶಿವಮೊಗ್ಗ ಲೈವ್‌.ಕಾಂ | ಮುಂದಿನ 3 ಪ್ಯಾರಾಗಳು ಕೆಳಗಿವೆ)

ಕಲ್ಪನಾ ರಮೇಶ್‌ ಅವರು ಬಿಜೆಪಿ ಪ್ರಮುಖ ಹಾಗೂ ಪಾಲಿಕೆಯ ಮಾಜಿ ಸದಸ್ಯ ರಮೇಶ್ (ರಾಮು) ಅವರ ಪತ್ನಿ. ಎಸ್‌ಪಿಎಂ ರಸ್ತೆಯ ಭೂಪಾಳಂ ಶಾಲೆ ಬಳಿ ಇರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು. ಕಲ್ಪನಾ ರಮೇಶ್ ಅವರು 2018 ರಲ್ಲಿ ನಡೆದ ಶಿವಮೊಗ್ಗ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಭ್ಯರ್ಥಿಯಾಗಿ 23ನೇ ವಾರ್ಡ್‌ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

Shivamogga-Former-Corporator-Kalpana-Ramesh-no-more