ಶಿವಮೊಗ್ಗದ ಪೊಲೀಸ್‌ ಠಾಣೆಯಲ್ಲಿ 88 ದ್ವಿಚಕ್ರ ವಾಹನಗಳು ಹರಾಜು, ಯಾವಾಗ?

ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಜಪ್ತಿ ಮಾಡಿ ಅಮಾನತ್ತುಪಡಿಸಿಕೊಂಡಿರುವ, ವಾರಸುದಾರರು ಪತ್ತೆಯಾಗದ ಅನುಪಯುಕ್ತ 88 ದ್ವಿಚಕ್ರ ವಾಹನಗಳನ್ನು ವಿಲೇವಾರಿ ಮಾಡಲು ಅಕ್ಟೋಬರ್ 28 ರಂದು ಬಹಿರಂಗ ಹರಾಜು ಮಾಡಲಾಗುತ್ತಿದೆ. (ಶಿವಮೊಗ್ಗ ಲೈವ್‌.ಕಾಂ | ಮುಂದಿನ 3 ಪ್ಯಾರಾಗಳು ಕೆಳಗಿವೆ)

2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದಂತೆ ಈ ಹರಾಜು ಪ್ರಕ್ರಿಯೆ ನಡೆಯಲಿದೆ. ಅಕ್ಟೋಬರ್ 28 ರಂದು ಬೆಳಿಗ್ಗೆ 9 ಗಂಟೆಗೆ ದೊಡ್ಡಪೇಟೆ ಪೊಲೀಸ್ ಠಾಣಾ ಆವರಣದಲ್ಲಿ ನೆರವೇರಲಿದೆ. ಆಸಕ್ತರು ನಿಗದಿತ ಸಮಯಕ್ಕೆ ದೊಡ್ಡಪೇಟೆ ಪೊಲೀಸ್ ಠಾಣಾ ಆವರಣಕ್ಕೆ ಆಗಮಿಸಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Doddapete-Police-Station-Shimoga