ಹಣಗೆರೆಗೆ ತೆರಳುತ್ತಿದ್ದ ಟಾಟಾ ಏಸ್‌ ಪಲ್ಟಿ, ದಾವಣಗೆರೆಯ ಭಕ್ತರು ಗಾಯ, ಎಲ್ಲಿ? ಹೇಗಾಯ್ತು ಘಟನೆ?

ತೀರ್ಥಹಳ್ಳಿ: ಹಣಗೆರೆಕಟ್ಟೆ ದೇವಾಲಯಕ್ಕೆ ತೆರಳುತ್ತಿದ್ದ ಟಾಟಾ ಏಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿದೆ. ವಾಹನದಲ್ಲಿದ್ದ 12 ಮಂದಿ ಗಾಯಗೊಂಡಿದ್ದಾರೆ. (ಈ ಸುದ್ದಿಯನ್ನು ಇನ್ನು 30 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಗಾಯಾಳುಗಳು ದಾವಣಗೆರೆ ಜಿಲ್ಲೆಯ ಜರಿಕಟ್ಟೆ ನಿವಾಸಿಗಳು ಎಂದು ತಿಳಿದು ಬಂದಿದೆ. ಇವರೆಲ್ಲರೂ ಟಾಟಾ ಏಸ್ ವಾಹನದಲ್ಲಿ ಹಣಗೆರೆಕಟ್ಟೆ ದೇವಾಲಯಕ್ಕೆ ದರ್ಶನಕ್ಕೆ ಆಗಮಿಸುತ್ತಿದ್ದರು. ತೀರ್ಥಹಳ್ಳಿ ತಾಲ್ಲೂಕಿನ ಕಲ್ಲುಕೊಪ್ಪ ಸಮೀಪ ವಾಹನ ಸಂಚರಿಸುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಪಲ್ಟಿಯಾಗಿದೆ. ಪರಿಣಾಮ ವಾಹನದಲ್ಲಿದ್ದ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

Tata-Ace-Vehicle-Incident-Near-Kallukoppa-in-Thirthahalli-Taluk-Enroute-to-Hanagere-Katte

ವಾಹನ ಪಲ್ಟಿಯಾಗುತ್ತಿದ್ದಂತೆ ಗಾಯಾಳುಗಳನ್ನು ರಕ್ಷಿಸಿ ತೀರ್ಥಹಳ್ಳಿ ಸರ್ಕಾರಿ ಜೆ.ಸಿ. ಆಸ್ಪತ್ರೆಗೆ ರವಾನಿಸಲಾಗಿತ್ತು. ಕೆಲವು ಗಾಯಳುಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಯಿತು. ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.