ಶಿವಮೊಗ್ಗ: ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಅವರು ಇಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುತ್ತಿದ್ದಾರೆ. (ಈ ಸುದ್ದಿಯನ್ನು ಇನ್ನು 49 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಅಕ್ಟೋಬರ್ 26ರ ಬೆಳಿಗ್ಗೆ ಬೆಂಗಳೂರಿನಿಂದ ರೈಲಿನಲ್ಲಿ ಹೊರಟು, ಬೆಳಿಗ್ಗೆ 8.49ಕ್ಕೆ ಬೀರೂರು ರೈಲ್ವೆ ನಿಲ್ದಾಣ ತಲುಪಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಭದ್ರಾವತಿಗೆ ಆಗಮಿಸಲಿದ್ದಾರೆ. ಭದ್ರಾವತಿ ಶಾಸಕ ಹಾಗೂ ಕೆ.ಆರ್.ಐ.ಡಿ.ಎಲ್. ಅಧ್ಯಕ್ಷ ಬಿ.ಕೆ.ಸಂಗಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 11.30 ಕ್ಕೆ ಶಿವಮೊಗ್ಗ ನಗರಕ್ಕೆ ಆಗಮಿಸಲಿರುವ ಸಭಾಪತಿ ಸಲೀಂ ಅಹ್ಮದ್, ಇಲ್ಯಾಸ್ ನಗರದ ಫಾರೂಕಿಯಾ ಶಾದಿ ಮಹಲ್‌ನಲ್ಲಿ ಶಿವಮೊಗ್ಗ ಜಿಲ್ಲಾ ಮೈನಾರಿಟಿ ಫೋರಂ ವತಿಯಿಂದ ಹಮ್ಮಿಕೊಳ್ಳಲಾಗಿರುವ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಶಿವಮೊಗ್ಗ ಸರ್ಕ್ಯೂಟ್ ಹೌಸ್‌ನಲ್ಲಿ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. ಸಂಜೆ 4.15ಕ್ಕೆ ಶಿವಮೊಗ್ಗ ಎಲ್.ಬಿ.ಎಸ್. ನಗರದ ಆರ್ಟ್ಸ್ ಸೈನ್ಸ್ ಪಿಯು ಕಾಲೇಜಿಗೆ ಭೇಟಿ ನೀಡಲಿದ್ದಾರೆ.
ಸಂಜೆ 6 ಗಂಟೆಗೆ ಸೊರಬದ ಬಂಗಾರಧಾಮದಲ್ಲಿ ಶ್ರೀ ಎಸ್.ಬಂಗಾರಪ್ಪ ವಿಚಾರ ವೇದಿಕೆ ಆಯೋಜಿಸಿರುವ ಬಂಗಾರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೊರಬದ ಕಾರ್ಯಕ್ರಮ ಮುಗಿಸಿ ರಾತ್ರಿ 9.30 ಕ್ಕೆ ಶಿವಮೊಗ್ಗ ಸರ್ಕ್ಯೂಟ್ ಹೌಸ್‌ಗೆ ಆಗಮಿಸಲಿದ್ದಾರೆ. ರಾತ್ರಿ 11 ಗಂಟೆಗೆ ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.