ಬರ, ಕುಡಿಯುವ ನೀರು, ವಿದ್ಯುತ್‌ ಸಮಸ್ಯೆ, ಅ.29ರಂದು ಮಹತ್ವದ ಚರ್ಚೆ

ಶಿವಮೊಗ್ಗ: ರಾಜ್ಯದಲ್ಲಿ ಎದುರಾಗಿರುವ ಬರಗಾಲ, ಕುಡಿಯುವ ನೀರಿನ ಅಭಾವ ಹಾಗೂ ಜಲವಿದ್ಯುತ್ ಉತ್ಪಾದನೆ ಕೊರತೆ ಎದುರಿಸಲು ಸರ್ಕಾರ ಸೂಕ್ತ ಯೋಜನೆ ರೂಪಿಸುತ್ತಿದೆ. ಅಕ್ಟೋಬರ್ 29 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ವಿಸ್ತೃತ ವರದಿ ಸಲ್ಲಿಸಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. (ಈ ಸುದ್ದಿಯನ್ನು ಇನ್ನು 44 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ನೀರಿನ ಅಭಾವ ಉಂಟಾದ ತಕ್ಷಣ ಜಲವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯವಾಗುತ್ತದೆ. ಸೋಲಾರ್ ಮತ್ತಿತರ ಪರ್ಯಾಯ ಇಂಧನ ಶಕ್ತಿ ಹೆಚ್ಚುತ್ತಿದ್ದರೂ ವಿದ್ಯುತ್ ಬಳಕೆಯ ಪ್ರಮಾಣವೂ ತೀವ್ರವಾಗಿ ಏರಿಕೆಯಾಗುತ್ತಿದೆ. ಈ ಎಲ್ಲ ಸವಾಲುಗಳನ್ನು ಎದುರಿಸಲು ಅ.29ರ ಕ್ಯಾಬಿನೆಟ್ ಸಭೆಯಲ್ಲಿ ನಮ್ಮ ಜಿಲ್ಲೆಯ ಬರದ ಸ್ಥಿತಿಗತಿಯ ಕುರಿತು ವರದಿ ಸಲ್ಲಿಕೆ ಮಾಡಿ ಚರ್ಚಿಸಲಾಗುವುದು.

Minister-Madhu-Bangarappa-Speaks-to-Media-in-Front-of-Congress-office-in-Shivamogga

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದಿಂದಲೂ ಬರ ಪರಿಹಾರಕ್ಕೆ ಹೆಚ್ಚಿನ ಬೆಂಬಲ ಸಿಗಬೇಕಿದೆ ಎಂದರು.