ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಮುಖ ಕಾರಣರಾದ ಸಿದ್ದರಾಮಯ್ಯ ಅವರನ್ನು ಪಕ್ಷದಲ್ಲಿ ‘ಯೂಸ್ ಅಂಡ್ ಥ್ರೋ’ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು. (ಈ ಸುದ್ದಿಯನ್ನು ಇನ್ನು 37 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, “ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ಸ್ಟಿಂಗ್’ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದರೂ, ಈ ಕುರಿತು ತನಿಖೆ ನಡೆಸಲು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸರ್ಕಾರ ಆಸಕ್ತಿ ತೋರುತ್ತಿಲ್ಲ. ಸಿಡಿ ಮತ್ತು ಪೆನ್ಡ್ರೈವ್ ಫ್ಯಾಕ್ಟರಿ ಯಾರು ಎಂಬುದನ್ನು ಕಾಂಗ್ರೆಸ್ ನಾಯಕರೇ ಸ್ವತಃ ಮಾತನಾಡಿಕೊಳ್ಳುತ್ತಿದ್ದಾರೆ. ಸಚಿವ ಯತೀಂದ್ರ ಅವರೆ ಹೇಳಿಕೆ ನೀಡಿದ್ದಾರೆ ಎಂದು ವಿಜಯೇಂದ್ರ ಕುಟುಕಿದರು.

ಈತನಕ ಸಿಡಿ ಫ್ಯಾಕ್ಟರಿ ಕೆಪಿಸಿಸಿ ಕಚೇರಿಯಲ್ಲಿತ್ತು. ಈಗ ವಿಧಾನಸೌಧಕ್ಕೆ ಶಿಫ್ಟ್ ಆಗಿದೆ. ಹಾಗಾಗಿಯೇ ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಭಯಭೀತರಾಗಿದ್ದಾರೆ. ಸರ್ಕಾರ ಕಾಲಹರಣ ಮಾಡುವುದನ್ನು ಬಿಟ್ಟು ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡಬೇಕು” ಎಂದು ಆಗ್ರಹಿಸಿದರು.