ಶಿವಮೊಗ್ಗ: ನಗರದ ಸುಲ್ತಾನ್ ಮಾರ್ಕೆಟ್ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ಚಾಕು ತೋರಿಸಿ ಜೀವ ಬೆದರಿಕೆ ಒಡ್ಡಿದ ದುಷ್ಕರ್ಮಿಗಳು ಹಣ ಸುಲಿಗೆ ಮಾಡಿದ್ದಾರೆ. (ಈ ಸುದ್ದಿಯನ್ನು ಇನ್ನು 35 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ರಿಯಲ್ ಎಸ್ಟೇಟ್ ಹಾಗೂ ಸೆಕೆಂಡ್ ಹ್ಯಾಂಡ್ ವಾಹನ ಬ್ರೋಕರ್ ಕೆಲಸ ಮಾಡುವ ಆಬೀದ್ ಅಹಮದ್ಗೆ ಬೆದರಿಕೆ ಒಡ್ಡಲಾಗಿದೆ. ಅಬೀದ್ ಅಹಮದ್ ಅವರು ಅಕ್ಟೋಬರ್ 24ರ ಸಂಜೆ ಸುಲ್ತಾನ್ ಮಾರ್ಕೆಟ್ನಲ್ಲಿ ತಮ್ಮ ಸ್ನೇಹಿತರೊಂದಿಗೆ ಮಾತನಾಡುತ್ತಾ ನಿಂತಿದ್ದರು. ಈ ವೇಳೆ ಆಟೋದಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಣ ನೀಡದಿದ್ದರೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡುವುದಾಗಿ ದುಷ್ಕರ್ಮಿಗಳು ಬೆದರಿಸಿದ್ದಾರೆ.

ಹೆದರಿದ ಆಬೀದ್ ತಮ್ಮ ಬಳಿಯಿದ್ದ ₹17,200 ನಗದು ನೀಡಿದ್ದಾರೆ. ಹಣ ಪಡೆದ ದುಷ್ಕರ್ಮಿಗಳು ಈ ವಿಷಯ ಯಾರಿಗಾದರೂ ತಿಳಿಸಿದರೆ ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.