ಶಿವಮೊಗ್ಗಕ್ಕೆ ಬರ್ತಿದ್ದಾರೆ ಕೃಷಿ ಸಚಿವ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಿದ್ದಾರೆ?

ಶಿವಮೊಗ್ಗ: ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಅವರು ಅಕ್ಟೋಬರ್ 30 ರಂದು ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಪ್ರವಾಸದ ಪಟ್ಟಿಯಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಅಕ್ಟೋಬರ್ 29ರಂದು ರಾತ್ರಿ ಸಚಿವ ನರೇಂದ್ರಸ್ವಾಮಿ ಬೆಂಗಳೂರಿನಿಂದ ರೈಲಿನ ಮೂಲಕ ಹೊರಡಲಿದ್ದಾರೆ. ಅಕ್ಟೋಬರ್ 30 ರಂದು ಬೆಳಿಗ್ಗೆ 5 ಗಂಟೆಗೆ ಶಿವಮೊಗ್ಗ ತಲುಪಲಿದ್ದಾರೆ. ಬೆಳಿಗ್ಗೆ 9:30 ರಿಂದ 10:30 ರವರೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ.

himoga-DC-office-and-Police-jeep-in-front-of-office

ನಂತರ ಬೆಳಿಗ್ಗೆ 11 ಗಂಟೆಗೆ ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಆಯೋಜಿಸಿರುವ ಕೃಷಿ ಮತ್ತು ತೋಟಗಾರಿಕೆ ಮೇಳದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಮಧ್ಯಾಹ್ನ 12:30 ಕ್ಕೆ ಶಿವಮೊಗ್ಗದಿಂದ ರಸ್ತೆ ಮಾರ್ಗವಾಗಿ ಮಂಡ್ಯ ಜಿಲ್ಲೆಗೆ ಪಯಣಿಸಲಿದ್ದಾರೆ.