ಶಿವಮೊಗ್ಗದ 23 ವರ್ಷದ ಯುವಕನಿಗೆ 20 ವರ್ಷ ಜೈಲು, ₹1,01,000 ದಂಡ, ಕಾರಣವೇನು?

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. (ಈ ಸುದ್ದಿಯನ್ನು ಇನ್ನು 39 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

13 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಘಟನೆ ಕುರಿತು ವಿನೋಬನಗರ ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಚಂದ್ರಕಲಾ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು ಎಂದು ಪೊಲೀಸ್‌ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shivamogga-Court-Building

ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹1,01,000 ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ ಸಂತ್ರಸ್ತ ಬಾಲಕಿಗೆ ₹4 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ ಎಂದು ತಿಳಿಸಲಾಗಿದೆ.

Editor JOIN OUR WHATSAPP GROUP