ಶಿವಮೊಗ್ಗ ಲೈವ್
ಶಿವಮೊಗ್ಗ: ವೀರಣ್ಣನ ಬೆನವಳ್ಳಿ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. (ಈ ಸುದ್ದಿಯನ್ನು ಇನ್ನು 19 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಹಾರನಹಳ್ಳಿ ನಿವಾಸಿ ತಿಪ್ಪೇಸ್ವಾಮಿ(70) ಮೃತ ವ್ಯಕ್ತಿ. ಹಾರನಹಳ್ಳಿಯಿಂದ ಕೆಲಸದ ನಿಮಿತ್ತ ವೀರಣ್ಣನ ಬೆನವಳ್ಳಿ ಗ್ರಾಮಕ್ಕೆ ಹೋಗಿದ್ದರು. ವಾಪಸ್ ಬರುವಾಗ ಆಯನೂರು ಕಡೆಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕುಂಸಿ ಪೊಲೀಸರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
