ಶಿವಮೊಗ್ಗ ಲೈವ್
ಹೊಳೆಹೊನ್ನೂರು: ಸಮೀಪದ ಹೊಳೆಹಟ್ಟಿ ಗ್ರಾಮದಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭೂಮಿಕಾ(28) ಮೃತ ಗೃಹಿಣಿ. (ಈ ಸುದ್ದಿಯನ್ನು ಇನ್ನು 20 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಹೊಳೆಹಟ್ಟಿ ಹೊಸ ಗ್ರಾಮದ ನಿವಾಸಿ ಶಿವು ಎಂಬುವರೊಂದಿಗೆ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಭೂಮಿಕಾ ಶಿವಮೊಗ್ಗದ ಖಾಸಗಿ ಕಂಪನಿಯೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದರು. ಸೋಮವಾರ ತಡ ರಾತ್ರಿ ಭೂಮಿಕಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
