ಶಿವಮೊಗ್ಗ ಲೈವ್
ಸಾಗರ: ನಗರದ ಜಾಮಿಯಾ ಮಸೀದಿ ಆಡಳಿತ ಮಂಡಳಿಯ ಹಣಕಾಸು ವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್ ಮಸೀದಿ ಕಚೇರಿ ಎದುರು ಏಕಾಂಗಿ ಧರಣಿ ನಡೆಸಿದರು. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಮಸೀದಿ ಆಡಳಿತ ಮಂಡಳಿಯ ವಿರುದ್ಧ ಕೆಎಎಸ್ ಅಥವಾ ಐಎಎಸ್ ಹಂತದ ಅಧಿಕಾರಿಗಳಿಂದ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಹೊಸ ಸಮಿತಿ ರಚಿಸಬಾರದು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಡಾ. ಆರ್.ಪ್ರತಿಭಾ ಮನವಿ ಸ್ವೀಕರಿಸಿ ಮೇಲಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿ ಹಿಂಪಡೆಯಲಾಯಿತು.
