ಶಿವಮೊಗ್ಗ ಲೈವ್.ಕಾಂ | THIRTHAHALLI | 05 ಡಿಸೆಂಬರ್ 2019
ತೀರ್ಥಹಳ್ಳಿಯ ಪಟ್ಟಣಕ್ಕೆ ಸಮೀಪದ ಯಡೇಹಳ್ಳಿ ಕೆರೆದಂಡೆಯಲ್ಲಿರುವ ಮನೆಯಲ್ಲಿ ಕಳ್ಳತನ ಮಾಡಲಾಗಿದ್ದು ಪ್ರಕರಣದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ 40 ಸಾವಿರ ರೂ.ನಗದು ದೋಚಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪಟ್ಟಣದ ಹೋಟೆಲ್ ಮಾಲೀಕ ರಾಮದಾಸ್ ಕಾಮತ್ ಎಂಬುವವರ ಮನೆಯಲ್ಲಿ ನಡೆದಿರುವ ಈ ಪ್ರಕರಣದಲ್ಲಿ ಮನೆಯ ಬಾಗಿಲನ್ನು ಒಡೆದು ಕಳ್ಳರು ಒಳ ನುಗ್ಗಿದ್ದಾರೆ. 8.73 ಲಕ್ಷ ರೂ. ಮೌಲ್ಯದ 291 ಗ್ರಾಂ ತೂಕದ ಚಿನ್ನ, 3500 ರೂ. ಮೌಲ್ಯದ 100 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಮತ್ತು 40 ಸಾವಿರ ನಗದು ಕಳ್ಳತನ ಮಾಡಿದ್ದಾರೆ.
ರಾಮದಾಸ ಕಾಮತ್ ದಂಪತಿ ಊರಿನಲ್ಲಿ ಇರಲಿಲ್ಲ. ಈ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
House Theft in Thirthahalli. Thieves robbed 8 lakh worth gold, 100 grams Silver jewels. Thirthahalli Police register the case.