ಶಿವಮೊಗ್ಗ ಲೈವ್
ಶಿವಮೊಗ್ಗ: ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಸರ್ಕಾರಿ ಬಸ್ ನಿಲ್ದಾಣದ ಮುಂದೆ ಕೆಎಸ್ಆರ್ಟಿಸಿ ಬಸ್ ತಡೆದ ಪ್ರತಿಭಟನೆ ನಡೆಸಲಾಯಿತು. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಕಿರಣ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಾರಿಗೆ ಬಸ್ ಪ್ರಯಾಣ ದರ ಏರಿಕೆಯಿಂದ ಸಾಮಾನ್ಯರು ತೀವ್ರ ತೊಂದರೆ ಎದುರಿಸಬೇಕಾಗುತ್ತದೆ. ಹಾಗಾಗಿ ಜನರ ಜೇಬಿಗೆ ಕನ್ನ ಹಾಕುವ ನಿರ್ಧಾರವನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರಯಾಣ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: