ಶಿವಮೊಗ್ಗ ಲೈವ್
ಭದ್ರಾವತಿ: ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನವೆಂಬರ್ 5ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 23 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಭದ್ರಾವತಿ ನಗರಸಭೆ ವ್ಯಾಪ್ತಿಯ ಸಿ.ಎನ್. ರಸ್ತೆ, ಹೊಳೆಹೊನ್ನೂರು ಮುಖ್ಯ ರಸ್ತೆ, ಇಂದಿರಾ ನಗರ, ಅನ್ವರ್ ಕಾಲೊನಿ, ದುರ್ಗಿನಗರ, ಅಮಿರ್ ಜಾನ್ ಕಾಲೊನಿ, ಮೊಮಿನ್ ಮೊಹಲ್ಲಾ, ಖಲಂದರ್ ನಗರ, ಜಟ್‌ಪಟ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
