ಶಿವಮೊಗ್ಗದ ಮಹಾವೀರ ಸರ್ಕಲ್‌ನಲ್ಲಿ ಮಾನವ ಸರಪಳಿ, ಘೋಷಣೆ, ಕಾರಣವೇನು?

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಇಂದು ವೋಟ್‌ ಬಚಾವೋ, ದೇಶ ಬಚಾವೋ ಘೋಷಣೆಯೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್‌ ಕಚೇರಿಯಿಂದ ಕಾಂಗ್ರೆಸ್‌ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಅಧ್ಯಕ್ಷ ಜ್ಞಾನೇಶ್‌ ಕುಮಾರ್‌ ವಿರುದ್ಧ ಘೋಷಣೆ ಕೂಗಿದರು. (ಈ ಸುದ್ದಿಯನ್ನು ಇನ್ನು 80 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಯಾರೆಲ್ಲ ಏನೆಲ್ಲ ಹೇಳಿದರು?

ಬಿ.ಎ.ರಮೇಶ್‌ ಹೆಗ್ಡೆ, ಮಾಜಿ ಕಾರ್ಪೊರೇಟರ್‌: ದೇಶಕ್ಕೆ ಸಂವಿಧಾನ, ಮೂಲಭೂತ ಹಕ್ಕು, 18 ವರ್ಷ ಮೇಲ್ಪಟ್ಟ ಎಲ್ಲರಿಗು ಮತದಾನದ ಹಕ್ಕು ನೀಡಿದ್ದು ಕಾಂಗ್ರೆಸ್‌ ಪಕ್ಷ. ಆದರೆ ಬಿಜೆಪಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಹಾಗಿದ್ದೂ ಇಂದು ದೇಶಾದ್ಯಂತ ಪ್ರಜಾಪ್ರಭುತ್ವ ಉಳಿಸಿ ಎಂದು ಹೋರಾಟ ನಡೆಸುತ್ತಿದ್ದಾರೆ. ಇದು ನಾಚಿಕೆಗೇಡು.

Congress-Protest-Against-Election-Commission-and-Central-Government

ಚೇತನ್‌ ಗೌಡ, ಅಧ್ಯಕ್ಷ, ರಾಜ್ಯ ಜವಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ: ಗೃಹ ಸಚಿವ ಅಮೀತ್‌ ಷಾ ಅವರು ಸಂವಿಧಾನ ಆಶಯಗಳನ್ನು ಗಾಳಿಗೆ ತೂರಿ ಮತಗಳವು ಮಾಡಿ ಅಧಿಕಾರ ನಡೆಸುತ್ತಿದ್ದಾರೆ. ಬಿಜೆಪಿಯ ಸುಳ್ಳು ಮತ್ತು ಸಂವಿಧಾನ ವಿರೋಧಿ ನಡೆಯನ್ನು ರಾಹುಲ್‌ ಗಾಂಧಿ ಅವರು ಪ್ರತಿದಿನ ಜನರಿಗೆ ತಲುಪಿಸುತ್ತಿದ್ದಾರೆ. ನಾವು ನಮ್ಮ ಮನೆ, ಬಡಾವಣೆ, ವಾರ್ಡ್‌ಗಳು, ಊರುಗಳಲ್ಲಿ ರಾಹುಲ್‌ ಗಾಂಧಿ ಅವರು ಹೇಳುತ್ತಿರುವ ಸಂಗತಿಗಳನ್ನು ತಲುಪಿಸಬೇಕಿದೆ.

ಮಧು ಸೂದನ್‌, ಸೂಡಾ ಅಧ್ಯಕ್ಷ: ಪ್ರಧಾನಿ ನರೇಂದ್ರ ಮೋದಿ ಅವರ ಹಿಟ್ಲರ್‌ ಆಡಳಿತದಿಂದಾಗಿ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಹಾಗಾಗಿ ಪ್ರಜಾಪ್ರಭುತ್ವದ ಉಳಿವು, ದೇಶದ ಜನರ ಮತಗಳ ಉಳಿವಾಗಿ ನಾವು ಹೋರಾಟ ನಡೆಸಬೇಕಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಶ್ವೇತಾ ಬಂಡಿ, ಮಹಿಳಾ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷೆ: ದೇಶದಲ್ಲಿ 13 ಕೋಟಿ ಮತದಾರರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಈ ಪೈಕಿ 3 ಕೋಟಿ ಜನರು ಬಾಂಗ್ಲಾದೇಶದ ಪ್ರಜೆಗಳು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರು ಹೇಳಿಕೆ ನೀಡಿದ್ದಾರೆ. ಆದರೆ ಈ ಅಂಕಿ ಅಂಶವನ್ನು ಅಮಿತ್‌ ಷಾ ಅವರು ಯಾವ ಆಧಾರದಲ್ಲಿ ನೀಡಿದ್ದಾರೆ. ಇದನ್ನು ಚುನಾವಣಾ ಆಯೋಗ ನೀಡಿದ ವರದಿಯೇ? ಇಂತಹ ಸುಳ್ಳುಗಳನ್ನು ಹೇಳಿ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ.

ಕಾಂಗ್ರೆಸ್‌ ಪಕ್ಷದ ಜಿಲ್ಲಾ ಅಧ್ಯಕ್ಷ ಹೆಚ್‌.ಸಿ.ಯೋಗೇಶ್‌ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.