ಶಿವಮೊಗ್ಗ ಲೈವ್
ಶಿವಮೊಗ್ಗ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಶಿವಮೊಗ್ಗ ಜಿಲ್ಲಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಸ್.ಟಿ. ಹಾಲಪ್ಪ ಅವರನ್ನು ಸರ್ಕಾರ ನೇಮಕ ಮಾಡಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ಸಿ.ಎಸ್. ಚಂದ್ರಭೂಪಾಲ್ ಅವರ ಬದಲಿಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ. ಹಾಲಪ್ಪ ಅವರನ್ನು ನೇಮಕ ಮಾಡಿ ಸರ್ಕಾರ ತಿದ್ದುಪಡಿ ಆದೇಶ ಹೊರಡಿಸಿದೆ. ಇನ್ನು, ನೂತನವಾಗಿ ನೇಮಕಗೊಂಡ ಎಸ್.ಟಿ. ಹಾಲಪ್ಪ ಅವರನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪಕ್ಷದ ಮುಖಂಡರು ಅಭಿನಂದಿಸಿದರು. (ಈ ಸುದ್ದಿಯನ್ನು ಇನ್ನು 22 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
