ಶಿವಮೊಗ್ಗ ಲೈವ್
ಸೊರಬ: ತಾಲ್ಲೂಕಿನ ಪ್ರವಾಸದ ವೇಳೆ ಕುಪ್ಪಗಡ್ಡೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ ನೀಡಿದರು. ಶಾಲೆಯ ಮೂಲಸೌಕರ್ಯ ಹಾಗೂ ಕಲಿಕೆಯ ಗುಣಮಟ್ಟ ಪರಿಶೀಲಿಸಿದರು. (ಈ ಸುದ್ದಿಯನ್ನು ಇನ್ನು 30 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಎಲ್ಕೆಜಿಯಿಂದಲೇ ಶಿಕ್ಷಣ ನೀಡಲಾಗುತ್ತಿರುವ ಈ ಶಾಲೆಗೆ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳು ದಾಖಲಾಗಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಅವರ ಪ್ರಶ್ನೆಗಳಿಗೆ ಉತ್ತರಿಸಿದರು. ಶಾಲೆಯ ಕರಾಟೆ ವಿದ್ಯಾರ್ಥಿಗಳ ಕೌಶಲ್ಯ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ಮಕ್ಕಳ ಶೂ ಹಾಗೂ ಚಪ್ಪಲಿಗಳನ್ನು ಪರಿಶೀಲಿಸಿದ ಸಚಿವ ಮಧು ಬಂಗಾರಪ್ಪ, ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದರು. ಶಾಲೆಯ ಶೈಕ್ಷಣಿಕ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದರ ಜತೆಗೆ ಕುಪ್ಪಗಡ್ಡೆ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಭರವಸೆ ನೀಡಿದರು.