ಶಿವಮೊಗ್ಗದಲ್ಲಿ ವಿದ್ಯುತ್‌ ಶಾಕ್‌ಗೆ ಕಾಡಾನೆ ಬಲಿ, ಎಲ್ಲಿ? ಹೇಗಾಯ್ತು ಘಟನೆ?

ಶಿವಮೊಗ್ಗ: ಕಾಡುಪ್ರಾಣಿ ಶಿಕಾರಿಗಾಗಿ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಗಂಡು ಆನೆಯೊಂದು ಮೃತಪಟ್ಟಿದೆ. ಶಿವಮೊಗ್ಗ ತಾಲ್ಲೂಕಿನ ಬಸವಾಪುರ ಸಮೀಪದ ಈಚಲವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಇಂದು ಬೆಳಗಿನ ಜಾವ ಆನೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಆಹಾರ ಅರಸಿ ಕಾಡಿನಿಂದ ಆನೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಜಮೀನಿನ ಮಾಲೀಕನನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಶಂಕರ ವಲಯ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Wild-elephant-electrocuted-to-death