ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿರುವ ಖಾಸಗಿ ಆಸ್ಪತ್ರೆಗಳು ಮತ್ತು ವಾಣಿಜ್ಯ ಕಟ್ಟಡಗಳಿಗೆ ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ನೇತೃತ್ವದ ತಂಡ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪಾರ್ಕಿಂಗ್ ಸ್ಥಳ ಪರಿಶೀಲನೆ ನಡೆಸಿತು. (ಈ ಸುದ್ದಿಯನ್ನು ಇನ್ನು 30 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಕಟ್ಟಡದ ನಕ್ಷೆಯಂತೆ ವಾಹನ ನಿಲುಗಡೆಗೆ ಮೀಸಲಿಟ್ಟಿರುವ ಜಾಗಗಳನ್ನು ಅಧಿಕಾರಿಗಳು ತಪಾಸಣೆ ಮಾಡಿದರು. ನಕ್ಷೆಯ ಪ್ರಕಾರ ಪಾರ್ಕಿಂಗ್‌ಗೆ ನಿಗದಿಪಡಿಸಿದ ಸ್ಥಳವನ್ನು ಕಡ್ಡಾಯವಾಗಿ ವಾಹನ ನಿಲುಗಡೆಗಷ್ಟೇ ಬಳಸಬೇಕು ಹಾಗೂ ಬೇರೆ ಉದ್ದೇಶಕ್ಕೆ ಬಳಸಬಾರದು ಎಂದು ಆಸ್ಪತ್ರೆಗಳು ಮತ್ತು ವಾಣಿಜ್ಯ ಕಟ್ಟಡಗಳ ಆಡಳಿತ ಮಂಡಳಿಗೆ ಸೂಚನೆ ನೀಡಲಾಯಿತು.

ನಕ್ಷೆಯಂತೆ ವಾಹನ ಪಾರ್ಕಿಂಗ್‌ಗೆ ಅಗತ್ಯ ಸ್ಥಳಾವಕಾಶ ಒದಗಿಸದ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗೆ ವರದಿ ಸಲ್ಲಿಸಲಾಗುವುದು ಎಂದು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.