ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿಯ ಬಾಗಿಲು, ಗೋಡೆಗೆ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಜಲ್ಲಾ ಅಧ್ಯಕ್ಷ ಎನ್.ಕೆ.ಜಗದೀಶ್ ಅವರು ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಗೆ ತೆರಳಿ ಇನ್ಸ್‌ಪೆಕ್ಟರ್‌ಗೆ ದೂರು ಸಲ್ಲಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 53 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಬಿಜೆಪಿ ಜಿಲ್ಲಾ ಕಚೇರಿ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮನೆಯ ಗೋಡೆಗಳ ಮೇಲೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಹೆಸರಿನಲ್ಲಿ ಪೋಸ್ಟರ್‌ಗಳನ್ನು ಅಂಟಿಸಲಾಗಿತ್ತು. ಇಂದ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಇದರ ಬೆನ್ನಿಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಜಗದೀಶ್ ಅವರು ದೂರು ನೀಡಿದ್ದಾರೆ.

##ದೂರಿನಲ್ಲಿ ಏನಿದೆ?
ಬಿಜೆಪಿ ಪಕ್ಷ ಮತ್ತು ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿರುವ ಪೋಸ್ಟರ್‌ಗಳನ್ನು ಪಕ್ಷದ ಕಚೇರಿಯ ಗೋಡೆಗಳ ಮೇಲೆ ಅಂಟಿಸಲಾಗಿದೆ. ನವೆಂಬರ್ 8ರ ಬೆಳಿಗ್ಗೆ ಘಟನೆ ಪಕ್ಷದ ಕಾರ್ಯಕರ್ತರ ಗಮನಕ್ಕೆ ಬಂದಿದೆ. ದೀಪಾವಳಿ ಹಬ್ಬದ ಸಂದರ್ಭ ಹೀಗೆ ಮಾಡಿರುವುದು ಬಿಜೆಪಿ ಕಾರ್ಯಕರ್ತರಿಗೆ ಆಘಾತ ಉಂಟು ಮಾಡಿದೆ. ಇದು ರಾಜಕೀಯ ಸೌರ್ಹಾದತೆ, ಸಾರ್ವಜನಿಕ ಶಾಂತಿಗೆ ಧಕ್ಕೆ ತರುವಂತಹ ಬೆಳವಣಿಗೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಜಿಲ್ಲಾ ಬಿಜೆಪಿ ಕಚೇರಿಗೆ ಪೋಸ್ಟರ್ ಅಂಟಿಸಿದ ಪ್ರಕರಣ ಸಂಬಂಧ ಸೂಕ್ತ ತನಿಖೆ ಆಗಬೇಕು. ಪೋಸ್ಟರ್ ಅಂಟಿಸಿದವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.